Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ವಿಮಾನ ನಿಲ್ದಾಣದ ಸುತ್ತಲ ಗ್ರಾಮಗಳಿಗೆ ಸಂಪರ್ಕ ಕಲ್ಪಿಸಲು ರಸ್ತೆ ನಿರ್ಮಾಣದ ಉದ್ದೇಶಕ್ಕಾಗಿ ರಾಜಮಂಡ್ರಿ ವಿಮಾನ ನಿಲ್ದಾಣದಲ್ಲಿರುವ 10.25 ಎಕರೆ ಎಎಐ ಭೂಮಿಗೆ ಸಮಾನವಾಗಿ ಆಂಧ್ರಪ್ರದೇಶ ಸರ್ಕಾರ ನೀಡಲು ಉದ್ದೇಶಿಸಿರುವ ಭೂಮಿಯೊಂದಿಗೆ ವಿನಿಮಯಕ್ಕೆ ಕೇಂದ್ರ ಸಚಿವ ಸಂಪುಟದ ಅನುಮೋದನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ರಾಜಮಂಡ್ರಿ ವಿಮಾನ ನಿಲ್ದಾಣದಲ್ಲಿರುವ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎ.ಎ.ಐ.)ಗೆ ಸೇರಿದ 10.25 ಎಕರೆ ಜಮೀನನ್ನು ಆಂಧ್ರಪ್ರದೇಶ ಸರ್ಕಾರಕ್ಕೆ ಸೇರಿದ ಸಮಾನ ಅಳತೆಯ ಜಮೀನಿನೊಂದಿಗೆ ವಿನಿಮಯ ಮಾಡಿಕೊಳ್ಳಲು ತನ್ನ ಅನುಮೋದನೆ ನೀಡಿದೆ. ರಾಜಮಂಡ್ರಿ ವಿಮಾನ ನಿಲ್ದಾಣದ ಸುತ್ತಲ ಗ್ರಾಮಗಳಿಗೆ ರಸ್ತೆ ಸಂಪರ್ಕ ಕಲ್ಪಿಸಲು ಮತ್ತು ಅಲ್ಲಿನ ಶ್ರೀ ಸಾಮಾನ್ಯರಿಗೆ ಸುಲಭವಾದ ಪ್ರವೇಶಾವಕಾಶ ಕಲ್ಪಿಸುವುದು ಈ ಪ್ರಸ್ತಾವನೆಯ ಉದ್ದೇಶವಾಗಿದೆ.

ಈ ಪ್ರಸ್ತಾವನೆಯು ರಸ್ತೆ ಸಂಪರ್ಕವನ್ನು ಒದಗಿಸುತ್ತದೆ ಮತ್ತು ಈ ಭಾಗದ ಶ್ರೀಸಾಮಾನ್ಯರಿಗೆ ಸುಲಭ ಪ್ರವೇಶಾವಕಾಶ ಕಲ್ಪಿಸುತ್ತದೆ, ಅದರಲ್ಲೂ ರೈತರಿಗೆ ತಮ್ಮ ಕೃಷಿ ಜಮೀನು ಪ್ರವೇಶಕ್ಕೆ ಅವಕಾಶ ನೀಡುತ್ತದೆ.

*****