Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ವಿಯೆಟ್ನಾಂ ನ ಫು ಕ್ವೊಕ್ ಸಮೀಪ ಭಾರತೀಯ ಪ್ರಜೆಗಳಿದ್ದ ದೋಣಿ ಅಪಘಾತವಾದ ದುರಂತಕ್ಕೆ ಪ್ರಧಾನಮಂತ್ರಿ ಸಂತಾಪ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ವಿಯೆಟ್ನಾಂನ ಫು ಕ್ವೊಕ್ ಸಮೀಪ ಭಾರತೀಯ ಪ್ರಜೆಗಳಿದ್ದ ದುರಂತ ದೋಣಿ ಅಪಘಾತದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಪ್ರಧಾನ ಮಂತ್ರಿಯವರು ತಮ್ಮ ಪ್ರಾಮಾಣಿಕ ಸಂತಾಪವನ್ನು ವ್ಯಕ್ತಪಡಿಸಿ, ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು.

ರಾಯಭಾರ ಕಚೇರಿ ಮತ್ತು ದೂತಾವಾಸದಿಂದ ಸಾಧ್ಯವಿರುವ ಎಲ್ಲ ನೆರವನ್ನು ನೀಡಲಾಗುತ್ತಿದೆ ಎಂದು ಶ್ರೀ ಮೋದಿಯವರು ಹೇಳಿದರು. ಭಾರತೀಯ ಅಧಿಕಾರಿಗಳು ವಿಯೆಟ್ನಾಂ ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದಾರೆ ಎಂದು ಅವರು ತಿಳಿಸಿದರು.

Xನ ಪೋಸ್ಟ್ ನಲ್ಲಿ ಶ್ರೀ ಮೋದಿಯವರು;

“ವಿಯೆಟ್ನಾಂ ನ ಫು ಕ್ವೊಕ್ ಸಮೀಪ ಭಾರತೀಯ ಪ್ರಜೆಗಳಿದ್ದ ದೋಣಿ ಅಪಘಾತದ ದುರಂತದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ.

ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಪ್ರಾಮಾಣಿಕ ಸಂತಾಪಗಳು. ಗಾಯಗೊಂಡು ಬದುಕುಳಿದವರ ಶೀಘ್ರ ಚೇತರಿಕೆಗಾಗಿ ನನ್ನ ಪ್ರಾರ್ಥನೆಗಳು.

ನಮ್ಮ ರಾಯಭಾರ ಕಚೇರಿ ಮತ್ತು ದೂತಾವಾಸಗಳು ಎಲ್ಲ ರೀತಿಯ ನೆರವು ನೀಡುತ್ತಿವೆ. ನಮ್ಮ ಅಧಿಕಾರಿಗಳು ವಿಯೆಟ್ನಾಂ ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದಾರೆ.”

 

*****