Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ವಿಶ್ವ ಜಲ ದಿನದಂದು ಜಲ ಸಂರಕ್ಷಣೆಯ  ಬದ್ಧತೆಯನ್ನು ಪುನರುಚ್ಚರಿಸಿದ ಪ್ರಧಾನಮಂತ್ರಿ


ವಿಶ್ವ ಜಲ ದಿನದಂದು ಪ್ರತಿ ಹನಿ ನೀರನ್ನು ಸಂರಕ್ಷಿಸುವ ಮತ್ತು ಈ ಅಮೂಲ್ಯ ಸಂಪನ್ಮೂಲವನ್ನು ಜವಾಬ್ದಾರಿಯುತವಾಗಿ ಬಳಸುವ ಬದ್ಧತೆಯನ್ನು ಎಲ್ಲರೂ ಪುನರುಚ್ಚರಿಸಬೇಕೆಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಕರೆ ನೀಡಿದರು.

ಜೀವವನ್ನು ಉಳಿಸಿಕೊಳ್ಳುವಲ್ಲಿ ಮತ್ತು ಗ್ರಹದ ಭವಿಷ್ಯವನ್ನು ರೂಪಿಸುವಲ್ಲಿ ನೀರಿನ ನಿರ್ಣಾಯಕ ಪಾತ್ರವನ್ನು ಒತ್ತಿ ಹೇಳಿದ ಶ್ರೀ ಮೋದಿಯವರು, ಸುಸ್ಥಿರ ಅಭ್ಯಾಸಗಳಲ್ಲಿ ತೊಡಗಿಸಿಕೊಳ್ಳುವ, ಜಾಗೃತಿ ಮೂಡಿಸುವ ಮತ್ತು ಸಂರಕ್ಷಣಾ ಸಂಸ್ಕೃತಿಯನ್ನು ಪೋಷಿಸುವವರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಧಾನಮಂತ್ರಿ ಅವರು ಎಕ್ಸ್ ತಾಣದಲ್ಲಿ ಈ ರೀತಿ ಸಂದೇಶ ಬರೆದಿದ್ದಾರೆ :

“ನೀರು ನಮ್ಮನ್ನು ಉಳಿಸಿಕೊಳ್ಳುತ್ತದೆ ಮತ್ತು ನಮ್ಮ ಗ್ರಹದ ಭವಿಷ್ಯವನ್ನು ರೂಪಿಸುತ್ತದೆ.

ವಿಶ್ವ ಜಲ ದಿನದಂದು, ಪ್ರತಿ ಹನಿ ನೀರನ್ನು ಸಂರಕ್ಷಿಸುವ ಮತ್ತು ಅದನ್ನು ಜವಾಬ್ದಾರಿಯುತವಾಗಿ ಬಳಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸೋಣ. ಇಂದು ಸುಸ್ಥಿರ ಅಭ್ಯಾಸಗಳಲ್ಲಿ ತೊಡಗಿಸಿಕೊಳ್ಳುವ, ಜಾಗೃತಿ ಮೂಡಿಸುವ ಮತ್ತು ಸಂರಕ್ಷಣಾ ಸಂಸ್ಕೃತಿಯನ್ನು ಪೋಷಿಸುವವರನ್ನು ಶ್ಲಾಘಿಸುವ ದಿನವಾಗಿದೆ.”

*****