Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ವಿಶ್ವ ಪರಿಸರ ದಿನದಂದು ಸಾಮೂಹಿಕ ಕ್ರಮದ ಕರೆಯನ್ನು ಬಿಂಬಿಸುವ ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಶ್ವ ಪರಿಸರ ದಿನದಂದು ಪರಿಸರ ಸವಾಲುಗಳನ್ನು ಎದುರಿಸಲು ಸಾಮೂಹಿಕ ಕ್ರಮ ಮತ್ತು ಸಾರ್ವಜನಿಕ ಭಾಗವಹಿಸುವಿಕೆಗಾಗಿ ಕೇಂದ್ರ ಸಚಿವರಾದ ಶ್ರೀ ಭೂಪೇಂದರ್ ಯಾದವ್ ಅವರ ಕರೆಯನ್ನು ಬಿಂಬಿಸುವ ಲೇಖನವನ್ನು ಹಂಚಿಕೊಂಡಿದ್ದಾರೆ.

ಸುಸ್ಥಿರ, ವೆಚ್ಚ-ಪರಿಣಾಮಕಾರಿ ಮತ್ತು ದೀರ್ಘಕಾಲೀನ ಪರಿಸರ ಪ್ರಯೋಜನಗಳನ್ನು ತಲುಪಿಸುವ ಸಾಮರ್ಥ್ಯವಿರುವ ಪ್ರಕೃತಿ ಆಧಾರಿತ ಪರಿಹಾರಗಳ ಮೂಲಕ ಈ ಸವಾಲುಗಳನ್ನು ಎದುರಿಸಬೇಕೆಂದು ಸಚಿವರು ಪ್ರತಿಪಾದಿಸಿದರು ಎಂದು ಪ್ರಧಾನಮಂತ್ರಿ ಹೇಳಿದರು.

ಪರಿಸರ ಜವಾಬ್ದಾರಿಯೊಂದಿಗೆ ಅಭಿವೃದ್ಧಿಯನ್ನು ಸಮತೋಲನಗೊಳಿಸುವ ಭಾರತದ ಬದ್ಧತೆಯ ಸಂಕೇತವಾಗಿ ಹಸಿರು ದೆಹಲಿ ಎಂದು ಕೇಂದ್ರ ಸಚಿವರು ಒತ್ತಿ ಹೇಳಿದರು ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ:

“ವಿಶ್ವ ಪರಿಸರ ದಿನದಂದು, ಸುಸ್ಥಿರ, ವೆಚ್ಚ-ಪರಿಣಾಮಕಾರಿ ಮತ್ತು ದೀರ್ಘಕಾಲೀನ ಪರಿಸರ ಪ್ರಯೋಜನಗಳನ್ನು ತಲುಪಿಸುವ ಸಾಮರ್ಥ್ಯವಿರುವ ಪ್ರಕೃತಿ ಆಧಾರಿತ ಪರಿಹಾರಗಳ ಮೂಲಕ ಪರಿಸರ ಸವಾಲುಗಳನ್ನು ಎದುರಿಸಲು ಸಾಮೂಹಿಕ ಕ್ರಮ ಮತ್ತು ಸಾರ್ವಜನಿಕ ಭಾಗವಹಿಸುವಿಕೆಗೆ ಕೇಂದ್ರ ಸಚಿವರಾದ ಶ್ರೀ @byadavbjp ಕರೆ ನೀಡಿದ್ದಾರೆ.

ಹಸಿರು ದೆಹಲಿಯು ಪರಿಸರ ಜವಾಬ್ದಾರಿಯೊಂದಿಗೆ ಅಭಿವೃದ್ಧಿಯನ್ನು ಸಮತೋಲನಗೊಳಿಸುವ ಭಾರತದ ಬದ್ಧತೆಯ ಸಂಕೇತವಾಗಲಿದೆ,’’ ಎಂದು ಅವರು ಒತ್ತಿ ಹೇಳಿದ್ದಾರೆ.

 

*****