Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶೇಖ್ ಅಹ್ಮದ್ ಬಿನ್ ರಶೀದ್ ಅಲ್ ಮಕ್ತೂಮ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾನ್ಯ ಶೇಖ್ ಅಹ್ಮದ್ ಬಿನ್ ರಶೀದ್ ಅಲ್ ಮಕ್ತೂಮ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಸಮಾಜ ಸೇವೆಗೆ ಶೇಖ್ ಅಹ್ಮದ್ ಬಿನ್ ರಶೀದ್ ಅಲ್ ಮಕ್ತೂಮ್ ಅವರ ಪ್ರಯತ್ನಗಳನ್ನು ಮುಂದಿನ ಪೀಳಿಗೆಗಳು ಸ್ಮರಿಸಲಿವೆ ಎಂದು ರಾಜಮನೆತನ ಮತ್ತು ದುಬೈ ಜನರಿಗೆ ಶ್ರೀ ಮೋದಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಶ್ರೀ ಮೋದಿ ಅವರು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

ಶೇಖ್ ಅಹ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಸಮಾಜಕ್ಕೆ ಸೇವೆ ಸಲ್ಲಿಸುವ ಅವರ ಪ್ರಯತ್ನಗಳನ್ನು ಮುಂದಿನ ಪೀಳಿಗೆಗಳು ನೆನಪು ಮಾಡಿಕೊಳ್ಳಲಿವೆ.

ದುಬೈ ರಾಜಮನೆತನ ಮತ್ತು ಜನರಿಗೆ ನನ್ನ ಆಳವಾದ ಸಂತಾಪಗಳು. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. 

@HHShkMohd

 

*****