Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶ್ರೀ ಕೂಚಿ ರಂಗ್ಕೌ ಝೆಲಿಯಾಂಗ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ


ನಾಗಾಲ್ಯಾಂಡ್ ಉಪಮುಖ್ಯಮಂತ್ರಿ ಶ್ರೀ ಟಿ ಆರ್ ಝೆಲಿಯಾಂಗ್ ಅವರ ಪುತ್ರ ಶ್ರೀ ಕೂಚಿ ರಂಗ್ಕೌ ಝೆಲಿಯಾಂಗ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.

ಶ್ರೀ ಮೋದಿಯವರು ದುಃಖದ ಈ ಸಮಯದಲ್ಲಿ ಮೃತರ ಕುಟುಂಬ ಮತ್ತು ಸ್ನೇಹಿತರಿಗೆ ತಮ್ಮ ಆಳವಾದ ಸಂತಾಪ ವ್ಯಕ್ತಪಡಿಸಿದ್ದಾರೆ ಹಾಗೂ ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.

ಶ್ರೀ ಮೋದಿ ಅವರ ಎಕ್ಸ್ ಪೋಸ್ಟ್ ಹೀಗಿದೆ:

ನಾಗಾಲ್ಯಾಂಡ್ ಉಪಮುಖ್ಯಮಂತ್ರಿ ಶ್ರೀ ಟಿ.ಆರ್. ಝೆಲಿಯಾಂಗ್ ಅವರ ಪುತ್ರ ಶ್ರೀ ಕೂಚಿ ರಂಗ್ಕೌ ಝೆಲಿಯಾಂಗ್ ಅವರ ಅಕಾಲಿಕ ನಿಧನದಿಂದ ದುಃಖವಾಗಿದೆ. ಈ ಶೋಕದ ಸಮಯದಲ್ಲಿ ಝೆಲಿಯಾಂಗ್ ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪಗಳು. ಅಗಲಿದ ಆತ್ಮಕ್ಕೆ ಶಾಂತಿ ಸಿಗಲಿ.

@TRZeliang

 

*****