ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026 ರ ಜನವರಿ 24 ರಂದು ಬೆಳಿಗ್ಗೆ 11 ಗಂಟೆಗೆ 18 ನೇ ರೋಜ್‌ಗಾರ್ ಮೇಳದಲ್ಲಿ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ ಯುವಜನರಿಗೆ 61,000ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿತರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನ ಮಂತ್ರಿಯವರ ಬದ್ಧತೆಗೆ ಅನುಗುಣವಾಗಿ, ರೋಜ್‌ಗಾರ್ ಮೇಳವು ಈ ದೃಷ್ಟಿಕೋನವನ್ನು ಕಾರ್ಯರೂಪಕ್ಕೆ ತರುವ ಗುರಿಯನ್ನು ಹೊಂದಿರುವ ಪ್ರಮುಖ ಉಪಕ್ರಮವಾಗಿದೆ. ಇದರ ಆರಂಭದಿಂದಲೂ, ದೇಶಾದ್ಯಂತ ಆಯೋಜಿಸಲಾದ ರೋಜ್‌ಗಾರ್ ಮೇಳಗಳ ಮೂಲಕ 11 ಲಕ್ಷಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ನೀಡಲಾಗಿದೆ.
18ನೇ ರೋಜ್‌ಗಾರ್ ಮೇಳವನ್ನು ದೇಶಾದ್ಯಂತ 45 ಸ್ಥಳಗಳಲ್ಲಿ ಆಯೋಜಿಸಲಾಗುವುದು. ಭಾರತದ ಎಲ್ಲಾ ಭಾಗಗಳಿಂದ ಆಯ್ಕೆಯಾದ ಹೊಸದಾಗಿ ನೇಮಕಗೊಂಡ ಅಭ್ಯರ್ಥಿಗಳು, ಗೃಹ ವ್ಯವಹಾರ ಸಚಿವಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಹಣಕಾಸು ಸೇವೆಗಳ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಸೇರಿದಂತೆ ಭಾರತ ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಸೇರಲಿದ್ದಾರೆ.
*****