Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸಾಂಪ್ರದಾಯಿಕ ಔಷಧ ಪದ್ಧತಿ ಕ್ಷೇತ್ರದಲ್ಲಿ ಸಹಕಾರ ಕುರಿತು ಭಾರತ ಮತ್ತು ಸೇಂಟ್ ವಿನ್ಸೆಂಟ್ ಮತ್ತು ಗ್ರೆನಡೈನ್ಸ್ ದೇಶದ ನಡುವಿನ ತಿಳುವಳಿಕೆಯ ಒಪ್ಪಂದ (ಎಮ್. ಓ. ಯು) ಯನ್ನು ಕ್ಯಾಬಿನೆಟ್ ಅನುಮೋದಿಸಿದೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟವು ಸಾಂಪ್ರದಾಯಿಕ ಔಷಧ ಪದ್ಧತಿಯ ಕ್ಷೇತ್ರದಲ್ಲಿ ಸಹಕಾರ ಕುರಿತು ಭಾರತ ಮತ್ತು ಸೇಂಟ್ ವಿನ್ಸೆಂಟ್ ಮತ್ತು ಗ್ರೆನಡೈನ್ಸ್ ದೇಶದ ನಡುವಿನ ಪ್ರಸ್ತಾವಿತ ತಿಳುವಳಿಕೆಯ ಒಪ್ಪಂದಕ್ಕೆ (ಎಂಓಯು) ಅನುಮೋದನೆ ನೀಡಿದೆ. 11 ಸೆಪ್ಟೆಂಬರ್ 2019 ರಂದು ನವದೆಹಲಿಯಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಯಿತು.

ಪ್ರಯೋಜನಗಳು:

ಸಾಂಪ್ರದಾಯಿಕ ಔಷಧ ಪದ್ಧತಿಯ ಪ್ರಚಾರಕ್ಕಾಗಿ ಭಾರತ ಮತ್ತು ಸೇಂಟ್ ವಿನ್ಸೆಂಟ್ ಮತ್ತು ಗ್ರೆನಡೈನ್ಸ್ ದೇಶದ ನಡುವಿನ ಸಹಕಾರಕ್ಕಾಗಿ ಈ ಒಪ್ಪಂದವು ಒಂದು ಚೌಕಟ್ಟನ್ನು ಒದಗಿಸುತ್ತದೆ ಮತ್ತು ಈ ಕ್ಷೇತ್ರದಲ್ಲಿ ಉಭಯ ದೇಶಗಳಿಗೆ ಪರಸ್ಪರ ಪ್ರಯೋಜನವನ್ನು ನೀಡುತ್ತದೆ. ಇದು ಸೇಂಟ್ ವಿನ್ಸೆಂಟ್ ಮತ್ತು ಗ್ರೆನಡೈನ್ಸ್‌ನಲ್ಲಿನ ಸಾಂಪ್ರದಾಯಿಕ ಔಷಧ ಪದ್ಧತಿಯ ಪ್ರೋತ್ಸಾಹ ಮತ್ತು ಪ್ರಚಾರಕ್ಕೆ ಕಾರಣವಾಗುತ್ತದೆ. ಸದರಿ ಒಪ್ಪಂದದಲ್ಲಿ ಉಲ್ಲೇಖಿಸಲಾದ ಚಟುವಟಿಕೆಗಳಿಂದಾಗಿ ಸೇಂಟ್ ವಿನ್ಸೆಂಟ್ ಮತ್ತು ಗ್ರೆನಡೈನ್ಸ್‌ನಲ್ಲಿ ಆಯುಷ್ ಔಷಧ ಪದ್ಧತಿಯ ಮಹತ್ವವನ್ನು ಹೆಚ್ಚಿಸುತ್ತದೆ. ಈ ಒಪ್ಪಂದದ ಪರಿಣಾಮವಾಗಿ, ಸಾಂಪ್ರದಾಯಿಕ ಔಷಧ ಪದ್ಧತಿಯಲ್ಲಿ ಜಂಟಿಯಾಗಿ ಸಂಶೋಧನೆ ನಡೆಸುವ ವೈದ್ಯರು ಮತ್ತು ವಿಜ್ಞಾನಿಗಳ ತರಬೇತಿ, ತಜ್ಞರ ವಿನಿಮಯವು ಔಷಧದ ಅಭಿವೃದ್ಧಿ ಮತ್ತು ಸಾಂಪ್ರದಾಯಿಕ ಪದ್ಧತಿಯ ಔಷಧದ ವೈದ್ಯವೃತ್ತಿಯಲ್ಲಿ ಹೊಸ ಆವಿಷ್ಕಾರಗಳಿಗೆ ಕಾರಣವಾಗಬಹುದು ಎಂದು ನಿರೀಕ್ಷಿಸಲಾಗಿದೆ.