Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸಾಂಪ್ರದಾಯಿಕ ಭಾರತೀಯ ಕರಕುಶಲತೆಯು ಆರ್ಥಿಕ ಬೆಳವಣಿಗೆಯನ್ನು ಹೇಗೆ ಪ್ರೇರೇಪಿಸಬಹುದು ಎಂಬುದರ ಕುರಿತು ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇಂದ್ರ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಬರೆದ ಲೇಖನವನ್ನು ಹಂಚಿಕೊಂಡಿದ್ದಾರೆ. ಸಾಂಪ್ರದಾಯಿಕ ಭಾರತೀಯ ಕರಕುಶಲತೆಯು ನಾವೀನ್ಯತೆ ಮತ್ತು ಜಾಗತಿಕ ಪಾಲುದಾರಿಕೆಗಳ ಮೂಲಕ ಆರ್ಥಿಕ ಬೆಳವಣಿಗೆಯನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಈ ಲೇಖನವು ಎತ್ತಿ ತೋರಿಸಿದೆ.

‘ಒಂದು ಜಿಲ್ಲೆ, ಒಂದು ಉತ್ಪನ್ನ’ ಉಪಕ್ರಮವು ಸ್ಥಳೀಯ ಕರಕುಶಲ ವಸ್ತುಗಳಿಗೆ ಮಾರುಕಟ್ಟೆ ಪ್ರವೇಶವನ್ನು ಪಡೆಯಲು, ಸುಸ್ಥಿರ ಜೀವನೋಪಾಯವನ್ನು ಸೃಷ್ಟಿಸಲು, ಪರಂಪರೆಯನ್ನು ಸಂರಕ್ಷಿಸಲು ಹಾಗೂ ಭಾರತದ ಜಾಗತಿಕ ಸ್ಪರ್ಧಾತ್ಮಕತೆಯನ್ನು ಬಲಪಡಿಸಲು ಸಹಾಯ ಮಾಡುತ್ತಿದೆ ಎಂದು ಶ್ರೀ ಮೋದಿ ಉಲ್ಲೇಖಿಸಿದ್ದಾರೆ.

ಶ್ರೀ ನರೇಂದ್ರ ಮೋದಿ ಅವರು ತಮ್ಮ ʻಎಕ್ಸ್ʼ ಪೋಸ್ಟ್‌ನಲ್ಲಿ ಹೀಗೆ ಹೇಳಿದ್ದಾರೆ:

ಸಾಂಪ್ರದಾಯಿಕ ಭಾರತೀಯ ಕರಕುಶಲತೆಯು ನಾವೀನ್ಯತೆ ಮತ್ತು ಜಾಗತಿಕ ಪಾಲುದಾರಿಕೆಯ ಮೂಲಕ ಆರ್ಥಿಕ ಬೆಳವಣಿಗೆಯನ್ನು ಹೇಗೆ ಹೆಚ್ಚಿಸುತ್ತದೆ ಎಂಬುದನ್ನು ಕೇಂದ್ರ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್‌ @nsitharaman ಉಲ್ಲೇಖಿಸಿದ್ದಾರೆ.

‘ಒಂದು ಜಿಲ್ಲೆ, ಒಂದು ಉತ್ಪನ್ನ’ ಉಪಕ್ರಮವು ಸ್ಥಳೀಯ ಕರಕುಶಲ ವಸ್ತುಗಳಿಗೆ ಮಾರುಕಟ್ಟೆ ಪ್ರವೇಶವನ್ನು ಪಡೆಯಲು, ಸುಸ್ಥಿರ ಜೀವನೋಪಾಯವನ್ನು ಸೃಷ್ಟಿಸಲು, ಪರಂಪರೆಯನ್ನು ಸಂರಕ್ಷಿಸಲು ಹಾಗೂ ಭಾರತದ ಜಾಗತಿಕ ಸ್ಪರ್ಧಾತ್ಮಕತೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ.

*****