Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸಾಂಪ್ರದಾಯಿಕ ವೈದ್ಯಕೀಯ ಪದ್ಧತಿಯ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ಮಯನ್ಮಾರ್ ನೊಂದಿಗೆ ತಿಳಿವಳಿಕೆ ಒಪ್ಪಂದಕ್ಕೆ ಸಂಪುಟ ಸಮ್ಮತಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಭಾರತ ಮತ್ತು ಮಯನ್ಮಾರ್ ನಡುವೆ ಸಾಂಪ್ರದಾಯಿಕ ವೈದ್ಯಕೀಯ ಪದ್ಧತಿಗಳ ಕ್ಷೇತ್ರದಲ್ಲಿ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಲು ತನ್ನ ಅನುಮೋದನೆ ನೀಡಿದೆ.

ಈ ತಿಳಿವಳಿಕೆ ಒಪ್ಪಂದವು ಮಯನ್ಮಾರ್ ನಲ್ಲಿ ಆಯುಷ್/ಸಾಂಪ್ರದಾಯಿಕ ವೈದ್ಯಕೀಯ ಪದ್ಧತಿಯ ಉತ್ತೇಜನಕ್ಕಾಗಿ ಎರಡೂ ರಾಷ್ಟ್ರಗಳ ನಡುವೆ ವಿನ್ಯಾಸಿತ ಚೌಕಟ್ಟಿನಲ್ಲಿ ಸಹಕಾರವನ್ನು ಒದಗಿಸಲಿದೆ. ಇದು ಆಯುಷ್ ವೈದ್ಯ ಪದ್ಧತಿಯ ಮಹತ್ವಕ್ಕೆ ಒತ್ತು ನೀಡುತ್ತದೆ ಮತ್ತು ಸಂರಕ್ಷಣೆ, ಉತ್ಪಾದನೆ ಮತ್ತು ಗುಣಮಟ್ಟಕ್ಕೂ ಮಹತ್ವ ನೀಡುತ್ತದೆ.

*****

AKT/VBA/SH