Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸಾರನಾಥವನ್ನು ಯುನೆಸ್ಕೋ (UNESCO) ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿಸಿರುವುದಕ್ಕೆ ಪ್ರಧಾನಮಂತ್ರಿ ಸಂತಸ


ಉತ್ತರಪ್ರದೇಶದ ಸಾರನಾಥವನ್ನು ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡಿರುವುದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ಕ್ಷಣ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. 

ಜಗತ್ತಿಗೆ ಸ್ಫೂರ್ತಿ ತುಂಬುವ ಜ್ಞಾನ, ಸಹಾನುಭೂತಿ ಮತ್ತು ಸಾಮರಸ್ಯದ ಕಾಲಾತೀತ ಸಂದೇಶ ನೀಡಿದ ಭಗವಾನ್ ಬುದ್ಧನೊಂದಿಗೆ ಸಾರನಾಥ ತಾಣವು ನಿಕಟ ನಂಟು ಹೊಂದಿದೆ ಎಂದು ಅವರು ಹೇಳಿದ್ದಾರೆ.

ಭಾರತದ ಗಾಢ ನಾಗರಿಕತೆ ಮತ್ತು ಆಧ್ಯಾತ್ಮಿಕ ಪರಂಪರೆಯನ್ನು ಈ ಮನ್ನಣೆಯು ಸಂಭ್ರಮಿಸುತ್ತದೆ ಎಂದು ಶ್ರೀ ಮೋದಿ ಅವರು ಒತ್ತಿ ಹೇಳಿದ್ದಾರೆ. ಪ್ರಪಂಚದಾದ್ಯಂತ ಹೆಚ್ಚು ಹೆಚ್ಚು ಜನರು ಸಾರನಾಥಕ್ಕೆ ಭೇಟಿ ನೀಡಿ ಭಗವಾನ್ ಬುದ್ಧನ ಆದರ್ಶಗಳೊಂದಿಗೆ ಸಂಪರ್ಕ ಸಾಧಿಸಲು ಇದು ಪ್ರೇರಣೆ ನೀಡಲಿದೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ. 

ಪ್ರಧಾನಮಂತ್ರಿ ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹಂಚಿಕೊಂಡಿದ್ದಾರೆ: 

“ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ಕ್ಷಣ!

ಉತ್ತರಪ್ರದೇಶದ ಸಾರನಾಥವು ಯುನೆಸ್ಕೋ ವಿಶ್ವ ಪಾರಂಪರಿಕ ಪಟ್ಟಿಯಲ್ಲಿ ಸೇರ್ಪಡೆಗೊಂಡಿರುವುದು ಸಂತಸ ತಂದಿದೆ.

ಸಾರನಾಥವು ಬುದ್ಧನೊಂದಿಗೆ ನಿಕಟ ಸಂಬಂಧವನ್ನು ಹೊಂದಿದೆ, ಅವರ ಕಾಲಾತೀತ ಜ್ಞಾನ, ಕರುಣೆ ಮತ್ತು ಸಾಮರಸ್ಯದ ಸಂದೇಶವು ಜಗತ್ತಿಗೆ ಸ್ಫೂರ್ತಿ ನೀಡುತ್ತದೆ.

ಭಾರತದ ಗಾಢ ನಾಗರಿಕತೆ ಮತ್ತು ಆಧ್ಯಾತ್ಮಿಕ ಪರಂಪರೆಯನ್ನು ಈ ಮನ್ನಣೆಯು ಆಚರಿಸುತ್ತದೆ. ಇದು ಪ್ರಪಂಚದಾದ್ಯಂತ ಹೆಚ್ಚಿನ ಜನರು ಸಾರನಾಥಕ್ಕೆ ಭೇಟಿ ನೀಡಿ ಬುದ್ಧನ ಆದರ್ಶಗಳೊಂದಿಗೆ ಸಂಪರ್ಕ ಸಾಧಿಸಲು ಸ್ಫೂರ್ತಿ ತುಂಬಲಿದೆ.

@UNESCO”

 

*****