ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಎಲ್ಲಾ ಸಿಆರ್ಪಿಎಫ್ ಸಂಸ್ಥಾಪನಾ ದಿನದ ಅಂಗವಾಗಿ ಅದರ ಎಲ್ಲಾ ಸಿಬ್ಬಂದಿಗೆ ಶುಭಾಶಯಗಳನ್ನು ಕೋರಿದ್ದಾರೆ. ಸಿಆರ್ಪಿಎಫ್ ತನ್ನ ಅಚಲ ಧೈರ್ಯ ಮತ್ತು ಕರ್ತವ್ಯ ಬದ್ಧತೆಯ ಮೂಲಕ ತನ್ನನ್ನು ತಾನು ಗುರುತಿಸಿಕೊಂಡಿದೆ ಎಂದು ಅವರು ಹೇಳಿದ್ದಾರೆ.
ದೇಶದ ಆಂತರಿಕ ಭದ್ರತೆಯನ್ನು ಕಾಪಾಡುವುದರಿಂದ ಹಿಡಿದು ಸವಾಲಿನ ಸಂದರ್ಭಗಳಲ್ಲಿ ನಾಗರಿಕರಿಗೆ ಸೇವೆ ಸಲ್ಲಿಸುವವರೆಗೆ, ಸಿಆರ್ಪಿಎಫ್ ಸಿಬ್ಬಂದಿ ಸದಾ ರಾಷ್ಟ್ರವನ್ನು ಮೊದಲ ಸ್ಥಾನದಲ್ಲಿ ಇರಿಸಿದ್ದಾರೆ ಎಂದು ಶ್ರೀ ನರೇಂದ್ರ ಮೋದಿ ಉಲ್ಲೇಖಿಸಿದ್ದಾರೆ. ಮಾವೋವಾದದ ಬೆದರಿಕೆಯನ್ನು ತೊಡೆದುಹಾಕುವಲ್ಲಿ ಅವರ ಪ್ರಯತ್ನಗಳು ವಿಶೇಷವಾಗಿ ಗಮನಾರ್ಹವಾಗಿವೆ ಮತ್ತು ಹಲವು ಜನರ ಜೀವನದಲ್ಲಿ ಶಾಂತಿ ಮತ್ತು ಪ್ರಗತಿಗೆ ಕೊಡುಗೆ ನೀಡಿವೆ ಎಂದು ಅವರು ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ.
ಪ್ರಧಾನಮಂತ್ರಿ ತಮ್ಮ X ಪೋಸ್ಟ್ ನಲ್ಲಿ ಹೀಗೆ ಹಂಚಿಕೊಂಡಿದ್ದಾರೆ:
”ಸಿಆರ್ಪಿಎಫ್ ಸಂಸ್ಥಾಪನಾ ದಿನದ ಅಂಗವಾಗಿ ಅದರ ಎಲ್ಲಾ ಸಿಬ್ಬಂದಿಗೆ ಶುಭಾಶಯಗಳು. ಸಿಆರ್ಪಿಎಫ್ ತನ್ನ ಅಚಲ ಧೈರ್ಯ ಮತ್ತು ಕರ್ತವ್ಯ ಬದ್ಧತೆಯ ಮೂಲಕ ತನ್ನನ್ನು ತಾನು ಗುರುತಿಸಿಕೊಂಡಿದೆ. ದೇಶದ ಆಂತರಿಕ ಭದ್ರತೆಯನ್ನು ಕಾಪಾಡುವುದರಿಂದ ಹಿಡಿದು ಸವಾಲಿನ ಸಂದರ್ಭಗಳಲ್ಲಿ ನಾಗರಿಕರಿಗೆ ಸೇವೆ ಸಲ್ಲಿಸುವವರೆಗೆ, ಸಿಆರ್ಪಿಎಫ್ ಸಿಬ್ಬಂದಿ ಸದಾ ರಾಷ್ಟ್ರವನ್ನು ಮೊದಲ ಸ್ಥಾನದಲ್ಲಿರಿಸಿದ್ದಾರೆ. ಮಾವೋವಾದದ ಬೆದರಿಕೆಯನ್ನು ತೊಡೆದುಹಾಕುವಲ್ಲಿ ಅವರ ಪ್ರಯತ್ನಗಳು ವಿಶೇಷವಾಗಿ ಗಮನಾರ್ಹವಾಗಿವೆ ಮತ್ತು ಹಲವು ಜನರ ಜೀವನದಲ್ಲಿ ಶಾಂತಿ ಮತ್ತು ಪ್ರಗತಿಗೆ ಕೊಡುಗೆ ನೀಡಿವೆ.
@crpfindia”
*****
Greetings to all CRPF personnel on their Raising Day. The CRPF has distinguished itself through its unwavering courage and commitment to duty. From safeguarding internal security to serving citizens during challenging situations, CRPF personnel have always placed the nation… pic.twitter.com/vfi9v3xR61
— Narendra Modi (@narendramodi) July 27, 2026