ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜ್ಯ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಸಿಕ್ಕಿಂ ಜನತೆಗೆ ಶುಭಾಶಯ ಕೋರಿದ್ದಾರೆ, ಈ ವರ್ಷ ಸಿಕ್ಕಿಂ ತನ್ನ 50ನೇ ರಾಜ್ಯೋತ್ಸವ ದಿನವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಇದು ಐತಿಹಾಸಿಕ ಮೈಲಿಗಲ್ಲಾಗಿದೆ. ಭಾರತದ ಅಭಿವೃದ್ಧಿ ಪಯಣಕ್ಕೆ ಸಿಕ್ಕಿಂನ ಕೊಡುಗೆ ಆಳವಾಗಿ ಮೌಲ್ಯಯುತವಾಗಿದೆ ಮತ್ತು ಪ್ರಶಂಸಿಸಲ್ಪಡುತ್ತದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. 50ನೇ ರಾಜ್ಯೋತ್ಸವ ದಿನಾಚರಣೆಯ ಸಂದರ್ಭದಲ್ಲಿ ಸಿಕ್ಕಿಂಗೆ ತಾವು ಇತ್ತೀಚೆಗೆ ಭೇಟಿ ನೀಡಿದ್ದನ್ನು ಸ್ಮರಿಸಿದ ಪ್ರಧಾನಮಂತ್ರಿ ಅವರು, ರಾಜ್ಯದ ಜನರು ತೋರಿದ ಆತ್ಮೀಯತೆ ಮತ್ತು ವಾತ್ಸಲ್ಯದಿಂದ ತಮ್ಮನ್ನು ಆಳವಾಗಿ ಸ್ಪರ್ಶಿಸಿದ್ದೇನೆ ಎಂದು ಹೇಳಿದರು.
ಶ್ರೀ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ:
“ನನ್ನ ಸಹೋದರ ಸಹೋದರಿಯರಿಗೆ ಅವರ ರಾಜ್ಯ ಸ್ಥಾಪನಾ ದಿನದಂದು ಶುಭಾಶಯಗಳು. ಭಾರತದ ಅಭಿವೃದ್ಧಿಗೆ ಸಿಕ್ಕಿಂನ ಕೊಡುಗೆ ಅಪಾರ ಮೌಲ್ಯಯುತವಾಗಿದೆ. ರಾಜ್ಯದ ಜನರಿಗೆ ಉತ್ತಮ ಆರೋಗ್ಯ ಮತ್ತು ಸಮೃದ್ಧಿ ಸಿಗಲಿ ಎಂದು ಹಾರೈಸುತ್ತೇನೆ.
ಸಿಕ್ಕಿಂ 50ನೇ ರಾಜ್ಯ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸುತ್ತಿರುವ ಸಮಯದಲ್ಲಿ ಈ ಸಂದರ್ಭ ಬಂದಿದೆ. ಕೆಲವು ದಿನಗಳ ಹಿಂದೆ, ಆಚರಣೆಗಾಗಿ ಸಿಕ್ಕಿಂನ ಜನರ ನಡುವೆ ಇರುವ ಸೌಭಾಗ್ಯ ನನಗೆ ಸಿಕ್ಕಿತ್ತು. ಸಿಕ್ಕಿಂನಲ್ಲಿ ನಾನು ಪಡೆದ ಆತ್ಮೀಯತೆ ನನ್ನ ನೆನಪಿನಲ್ಲಿ ಉಳಿಯುತ್ತದೆ. ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರವು ಸಿಕ್ಕಿಂನ ಬೆಳವಣಿಗೆಯ ಪಥವನ್ನು ಬೆಂಬಲಿಸುತ್ತಲೇ ಇರುತ್ತದೆ.”
*****
Greetings to my sisters and brothers on their Statehood Day. The contribution of Sikkim to India’s development is deeply valued. Wishing the people of the state good health and prosperity.
— Narendra Modi (@narendramodi) May 16, 2026
This occasion comes at a time when Sikkim is marking 50th Statehood Day celebrations. A…