Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸುಕ್ಮಾ ದಾಳಿಯಲ್ಲಿ ಹುತಾತ್ಮರಾದ ಸಿ.ಆರ್.ಪಿ.ಎಫ್. ನ ವೀರ ಯೋಧರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಛತ್ತೀಸಗಡದ ಸುಕ್ಮಾ ದಾಳಿಯಲ್ಲಿ ಹುತಾತ್ಮರಾದ ಸಿ.ಆರ್.ಪಿ.ಎಫ್.ನ ವೀರ ಯೋಧರಿಗೆ ಗೌರವ ನಮನ ಸಲ್ಲಿಸಿದ್ದಾರೆ.

“ಭಾರತವು ಛತ್ತೀಸಗಡದ ಸುಕ್ಮಾ ದಾಳಿಯಲ್ಲಿ ಹುತಾತ್ಮರಾದ ಸಿ.ಆರ್.ಪಿ.ಎಫ್.ನ ವೀರ ಯೋಧರಿಗೆ ನಮಿಸುತ್ತದೆ. ವೀರ ಯೋಧರ ಕುಟುಂಬದವರು ಮತ್ತು ಸ್ನೇಹಿತರೊಂದಿಗೆ ನನ್ನ ಸಂವೇದನೆ ಇದೆ. ಈ ದುಃಖಮಯ ಸಂದರ್ಭದಲ್ಲಿ ಇಡೀ ದೇಶ ಹೆಗಲಿಗೆ ಹೆಗಲುಕೊಟ್ಟು ಅವರೊಂದಿಗೆ ನಿಲ್ಲಲಿದೆ.”, ಎಂದು ಪ್ರಧಾನಿ ಹೇಳಿದ್ದಾರೆ.

***