Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸ್ಪೇನ್ ಅಧ್ಯಕ್ಷರು ಪ್ರಧಾನಮಂತ್ರಿ ಅವರನ್ನು ಭೇಟಿಯಾದರು

ಸ್ಪೇನ್ ಅಧ್ಯಕ್ಷರು ಪ್ರಧಾನಮಂತ್ರಿ ಅವರನ್ನು ಭೇಟಿಯಾದರು

 


ಸ್ಪೇನ್‌ ಅಧ್ಯಕ್ಷರಾದ ಶ್ರೀ ಪೆಡ್ರೋ ಸಾಂಚೆಝ್ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ರಕ್ಷಣಾ, ಭದ್ರತೆ, ತಂತ್ರಜ್ಞಾನ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಭಾರತ-ಸ್ಪೇನ್ ಸ್ನೇಹವನ್ನು ಇನ್ನಷ್ಟು ಬಲಪಡಿಸುವ ಮಾರ್ಗಗಳ ಕುರಿತು ಉಭಯ ನಾಯಕರು ಚರ್ಚಿಸಿದರು.

2026ನೇ ವರ್ಷವನ್ನು ಭಾರತ ಮತ್ತು ಸ್ಪೇನ್ ದೇಶಗಳು ಸಂಸ್ಕೃತಿ, ಪ್ರವಾಸೋದ್ಯಮ ಮತ್ತು ಕೃತಕ ಬುದ್ಧಿಮತ್ತೆ (AI) ವರ್ಷವಾಗಿ ಆಚರಿಸುತ್ತಿವೆ.

ಇದನ್ನು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ ಪ್ರಧಾನ ಮಂತ್ರಿಗಳು ಹೀಗೆ ಬರೆದುಕೊಂಡಿದ್ದಾರೆ:

”ಸ್ಪೇನ್ ಅಧ್ಯಕ್ಷ ಪೆಡ್ರೋ ಸಾಂಚೆಝ್ ಅವರೊಂದಿಗೆ ಫಲಪ್ರದವಾದ ಸಭೆ ನಡೆಸಿದೆ. ರಕ್ಷಣಾ, ಭದ್ರತೆ, ತಂತ್ರಜ್ಞಾನ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಭಾರತ-ಸ್ಪೇನ್ ಸ್ನೇಹವನ್ನು ಬಲಪಡಿಸುವ ಮಾರ್ಗಗಳ ಕುರಿತು ಚರ್ಚೆ ನಡೆಸಿದೆವು. ನಮ್ಮ ದೇಶಗಳು 2026ನೇ ವರ್ಷವನ್ನು ಭಾರತ-ಸ್ಪೇನ್ ಸಂಸ್ಕೃತಿ, ಪ್ರವಾಸೋದ್ಯಮ ಮತ್ತು ಎಐ ವರ್ಷದಾಗಿ ಆಚರಿಸುತ್ತಿವೆ. ಇದು ಜನರ ನಡುವಿನ ಸಂಪರ್ಕವನ್ನು ಇನ್ನಷ್ಟು ಗಾಢಗೊಳಿಸುತ್ತದೆ. ಭಾರತಕ್ಕೆ ದೊಡ್ಡ ಪ್ರಮಾಣದ ವಿಶ್ವವಿದ್ಯಾಲಯಗಳ ಪ್ರತಿನಿಧಿ ತಂಡ ಬಂದಿರುವುದು ಸಂತೋಷದ ಸಂಗತಿ. ಇದರಿಂದ ನಮ್ಮ ಜನರ ನಡುವಿನ ಸಂಪರ್ಕ ಇನ್ನಷ್ಟು ಬಲವಾಗುತ್ತದೆ.

ಐರೋಪ್ಯ ಒಕ್ಕೂಟ ಜೊತೆಗಿನ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದವು ಸ್ಪೇನ್ ಜೊತೆಗಿನ ಆರ್ಥಿಕ ಸಹಭಾಗಿತ್ವಕ್ಕೆ ಬಹಳ ಸಕಾರಾತ್ಮಕ ಪರಿಣಾಮ ಉಂಟುಮಾಡಿ, ನಮ್ಮ ದೇಶಗಳ ಜನರಿಗೆ ಹೊಸ ಅವಕಾಶಗಳನ್ನು ಒದಗಿಸುತ್ತದೆ.”

@sanchezcastejon”

 

“Tuve una reunión productiva con el presidente Pedro Sánchez en Delhi. Hablamos de formas de fortalecer la amistad entre la India y España, especialmente en ámbitos como la defensa, la seguridad, la tecnología y otros.

Nuestros países celebran 2026 como el Año India-España de la Cultura, el Turismo y la IA. Esto profundizará los vínculos entre nuestros pueblos. Me alegra ver que también ha venido a la India una gran delegación de universidades. Esto también contribuirá en gran medida a acercar a nuestros pueblos.

El histórico acuerdo de libre comercio con la UE tendrá un impacto muy positivo en la asociación económica con España y brindará nuevas oportunidades a los ciudadanos de nuestros países.

@sanchezcastejon”

 

*****