ಪಿಎಂಇಂಡಿಯಾ
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಜನತೆಗೆ ಹಾರ್ದಿಕ ಶುಭಾಶಯ ಕೋರಿದ್ದಾರೆ. ವಸಾಹತುಶಾಹಿ ಆಳ್ವಿಕೆಯನ್ನು ಕೊನೆಗೊಳಿಸಲು ನಮ್ಮ ಕೆಚ್ಚೆದೆಯ ಸ್ವಾತಂತ್ರ್ಯ ಹೋರಾಟಗಾರರ ಅಚಲ ಸ್ಥೈರ್ಯ, ದಣಿವರಿಯದ ಹೋರಾಟ ಮತ್ತು ತಾಯ್ನಾಡಿಗೆ ಅವರ ಅನನ್ಯ ಸಮರ್ಪಣೆಯನ್ನು ಈ ರಾಷ್ಟ್ರೀಯ ಉತ್ಸವವು ನೆನಪಿಸುತ್ತದೆ ಎಂದು ಅವರು ಹೇಳಿದ್ದಾರೆ.
ವಿಕಸಿತ ಭಾರತದ ಸಂಕಲ್ಪವನ್ನು ಸಾಕಾರಗೊಳಿಸಲು ಸಾಮೂಹಿಕವಾಗಿ ಕಾರ್ಯಪ್ರವೃತ್ತರಾಗಿರುವ ಈ ಸಂದರ್ಭದಲ್ಲಿ ಅವರ ಕನಸುಗಳು ನಮಗೆ ಸ್ಫೂರ್ತಿ ನೀಡುತ್ತಲೇ ಇರಲಿವೆ ಎಂದು ಹೇಳಿರುವ ಪ್ರಧಾನಮಂತ್ರಿಗಳು, ನಾಗರಿಕರು ಸ್ವಾತಂತ್ರ್ಯ ಹೋರಾಟಗಾರರ ಆದರ್ಶಗಳನ್ನು ಅಳವಡಿಸಿಕೊಳ್ಳುವಂತೆ ಕರೆ ನೀಡಿದ್ದಾರೆ.
ನಮ್ಮ ರಾಷ್ಟ್ರವು 140 ಕೋಟಿ ಭಾರತೀಯರ ಬಲದೊಂದಿಗೆ, ವಿವಿಧ ಕ್ಷೇತ್ರಗಳಲ್ಲಿ ಪ್ರಗತಿಯ ಹೊಸ ಎತ್ತರಕ್ಕೇರುತ್ತಿದೆ ಎಂದು ಶ್ರೀ ಮೋದಿ ಅವರು ಒತ್ತಿ ಹೇಳಿದ್ದಾರೆ. ಮುಂಬರುವ ದಿನಗಳಲ್ಲಿ ಈ ಅಭಿವೃದ್ಧಿಯ ಪಯಣ ಇನ್ನೂ ಹೆಚ್ಚಿನ ವೇಗದಲ್ಲಿ ಸಾಗಲಿ ಎಂದು ಅವರು ಆಶಿಸಿದ್ದಾರೆ.
ಪ್ರಧಾನಮಂತ್ರಿಯವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ :
“ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು.
ವಸಾಹತುಶಾಹಿ ಆಳ್ವಿಕೆಯ ಅಂತ್ಯವನ್ನು ಖಚಿತಪಡಿಸಿದ ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರನ್ನು ನಾವು ಕೃತಜ್ಞತೆಯಿಂದ ಸ್ಮರಿಸುತ್ತೇವೆ. ಅವರ ಸ್ಥೈರ್ಯ, ತ್ಯಾಗ ಮತ್ತು ಅಚಲ ಬದ್ಧತೆಯಿಂದ ಸ್ವಾತಂತ್ರ್ಯ ದೊರೆತಿದೆ. ವಿಕಸಿತ ಭಾರತ ನಿರ್ಮಾಣಕ್ಕಾಗಿ ನಾವು ಒಟ್ಟಾಗಿ ಕಾರ್ಯನಿರ್ವಹಿಸುತ್ತಿರುವಾಗ ಅವರ ಕನಸುಗಳು ನಮಗೆ ಸ್ಫೂರ್ತಿ ನೀಡುತ್ತಲೇ ಇರಲಿವೆ.
ನಮ್ಮ ರಾಷ್ಟ್ರವು 140 ಕೋಟಿ ಭಾರತೀಯರಿಂದ ಮುನ್ನಡೆಸಲ್ಪಟ್ಟು ವಿವಿಧ ಕ್ಷೇತ್ರಗಳಲ್ಲಿ ಪ್ರಗತಿಯ ಹೊಸ ಎತ್ತರಕ್ಕೇರುತ್ತಿದೆ. ಮುಂಬರುವ ದಿನಗಳಲ್ಲಿ ಈ ಪಯಣವು ಇನ್ನೂ ಹೆಚ್ಚಿನ ವೇಗದಲ್ಲಿ ಮುಂದೆ ಸಾಗಲಿ.”
सभी देशवासियों को स्वतंत्रता दिवस की असीम शुभकामनाएं।
यह राष्ट्रीय पर्व हमें देश के वीर सेनानियों के अद्भुत साहस, अथक संघर्ष और मातृभूमि के प्रति अतुलनीय समर्पण का स्मरण कराता है।
आइए, उनके आदर्शों को अपनाकर विकसित भारत के संकल्प को साकार करें।”
*****
Warm greetings on the occasion of Independence Day.
— Narendra Modi (@narendramodi) August 15, 2026
We remember with gratitude the countless freedom fighters whose courage, sacrifice and unwavering commitment ensured the end of colonial rule. Their dreams continue to inspire us as we work together to build a Viksit Bharat.…