Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಹರಿಯಾಣ ಮಾಜಿ ಮುಖ್ಯಮಂತ್ರಿ ಶ್ರೀ ಓಂ ಪ್ರಕಾಶ್ ಚೌಟಾಲಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ 


ಹರಿಯಾಣದ ಮಾಜಿ ಮುಖ್ಯಮಂತ್ರಿ ಶ್ರೀ ಓಂ ಪ್ರಕಾಶ್ ಚೌತಾಲಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ.

ಶ್ರೀ ಮೋದಿ ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:

“ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌತಾಲಾ ಅವರ ನಿಧನದಿಂದ ಅತೀವ ದುಃಖವಾಗಿದೆ. ಅವರು ಅನೇಕ ವರ್ಷಗಳ ಕಾಲ ರಾಜ್ಯ ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು ಮತ್ತು ಚೌಧರಿ ದೇವಿ ಲಾಲ್ ಅವರ ಕಾರ್ಯಗಳನ್ನು ಮುಂದುವರಿಸಲು ಸತತವಾಗಿ ಶ್ರಮಿಸಿದ್ದರು. ದುಃಖದ ಈ ಸಮಯದಲ್ಲಿ ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ನನ್ನ ಸಂತಾಪಗಳು. ಓಂ ಶಾಂತಿ.”

 

 

*****