Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಹಿಮಾಚಲ ಪ್ರದೇಶದಲ್ಲಿ ಭೂಕುಸಿತದಿಂದ ಉಂಟಾದ ಜೀವಹಾನಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಭೂಕುಸಿತ ಸಂಬಂಧಿ ಅಪಘಾತದಿಂದ ಉಂಟಾದ ಜೀವಹಾನಿಗೆ ದುಃಖ ವ್ಯಕ್ತಪಡಿಸಿದ್ದಾರೆ.

“ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಭೂಕುಸಿತ ಸಂಬಂಧಿ ಅಪಘಾತಗಳಿಂದ ಆಗಿರುವ ಜೀವಹಾನಿಯಿಂದ ದುಃಖಿತನಾಗಿದ್ದೇನೆ. ಸಾವಿಗೀಡಾದವರ ಕುಟುಂಬದವರೊಂದಿಗೆ ನನ್ನ ಸಂವೇದನೆ ಇದೆ.

ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿನ ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.

ಎನ್.ಡಿ.ಆರ್.ಎಫ್. ತಂಡ ಮಂಡಿಗೆ ತೆರಳುತ್ತಿದ್ದು ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿಕೊಳ್ಳಲಿದೆ ಮತ್ತು ಎಲ್ಲ ಅಗತ್ಯ ನೆರವು ಒದಗಿಸಲಿದೆ.”ಎಂದು ಪ್ರಧಾನಿ ತಿಳಿಸಿದ್ದಾರೆ.

****

AKT/NT