Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಹಿಮಾಚಲ ಪ್ರದೇಶದ ಜನತೆಗೆ ಅವರ ರಾಜ್ಯ ಸ್ಥಾಪನಾ ದಿನದಂದು ಶುಭ ಕೋರಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಿಮಾಚಲ ಪ್ರದೇಶದ ಜನತೆಗೆ ಅವರ ರಾಜ್ಯ ಸ್ಥಾಪನಾ ದಿನದಂದು ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ.

ಹಿಮಾಚಲ ಪ್ರದೇಶವು ಪ್ರಕೃತಿ ಮತ್ತು ಸಂಸ್ಕೃತಿಯ ವಿಶಿಷ್ಟ ಸಂಗಮ ಎಂದು ಪ್ರಧಾನಿ ಬಣ್ಣಿಸಿದ್ದಾರೆ. ರಾಜ್ಯದ ಜನರ ಗಮನಾರ್ಹ ಪ್ರತಿಭೆ ಮತ್ತು ಶೌರ್ಯವನ್ನು ಶ್ಲಾಘಿಸಿದ ಅವರು, ಅವರು ಸದಾ ಭಾರತ ಮಾತೆಯ ಸೇವೆಗೆ ತಮ್ಮನ್ನು ತಾವು ಸಮರ್ಪಿಸಿಕೊಂಡಿದ್ದಾರೆ ಎಂದರು. ಹಿಮಾಚಲ ಪ್ರದೇಶದ ಜನರಿಗೆ ಉಜ್ವಲ ಭವಿಷ್ಯಕ್ಕಾಗಿ ಶುಭ ಹಾರೈಸಿದ ಪ್ರಧಾನಮಂತ್ರಿ ಅವರು, ದೇವಭೂಮಿಯ ನಿರಂತರ ಸಮೃದ್ಧಿಗಾಗಿ ಪ್ರಾರ್ಥಿಸಿದರು.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

“प्रकृति और संस्कृति की संगमस्थली हिमाचल प्रदेश के अपने सभी परिवारजनों को पूर्ण राज्यत्व दिवस की अनेकानेक शुभकामनाएं। अपनी अद्भुत प्रतिभा और पराक्रम से वे सदैव मां भारती की सेवा करते आए हैं। मैं उनके सुनहरे भविष्य के साथ-साथ इस देवभूमि की समृद्धि की कामना करता हूं।”

 

*****