Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

2018ರ ಮಾರ್ಚ್ 16ರಂದು ಮಣಿಪುರಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2018ರ ಮಾರ್ಚ್ 16ರಂದು ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ.

ಇಂಫಾಲದ ಮಣಿಪುರ ವಿಶ್ವವಿದ್ಯಾಲಯದಲ್ಲಿ ಅವರು ಭಾರತೀಯ ವಿಜ್ಞಾನ ಕಾಂಗ್ರೆಸ್ ನ 105ನೇ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ಪ್ರತಿಷ್ಠಿತ ಕಾರ್ಯಕ್ರಮವನ್ನು ಆಯೋಜಿಸುತ್ತಿರುವ ಈಶಾನ್ಯ ರಾಜ್ಯದ ಎರಡನೇ ನಗರ ಇಂಫಾಲ ಆಗಿದೆ.

ಲುವಾಂಗ್ ಸಂಗ್ಬಮ್ ನಲ್ಲಿರುವ ಲುವಾಂಗ್ ಪೋಕ್ಪಾ ಬಹು ಕ್ರೀಡಾ ಸಮುಚ್ಛಯದಲ್ಲಿ ಪ್ರಧಾನಿಯವರು ರಾಷ್ಟ್ರೀಯ ಕ್ರೀಡಾ ವಿಶ್ವವಿದ್ಯಾಲಯ, 1000 ಅಂಗನವಾಡಿ ಕೇಂದ್ರ, ಶಿಕ್ಷಕರು, ವೈದ್ಯರು ಮತ್ತು ಶುಶ್ರೂಷಕಿಯರಿಗೆ 19 ವಸತಿ ಸಮುಚ್ಚಯ ಮತ್ತು ಇತರ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಲುವಾಂಗ್ ಪೋಕ್ಪಾ ಬಹು ಕ್ರೀಡಾ ಸಮುಚ್ಛಯ, ರಾಣಿ ಗೈಡಿನಲಿಯು ಉದ್ಯಾನ ಮತ್ತು ಇತರ ಅಭಿವೃದ್ಧಿ ಯೋಜನೆಗಳಿಗೂ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅವರು ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

*****