Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

2025ರ ಫಿಡೆ ವಿಶ್ವ ರಾಪಿಡ್ ಚೆಸ್ ಚಾಂಪಿಯನ್ ಷಿಪ್ ನಲ್ಲಿ ಕಂಚಿನ ಪದಕ ಗೆದ್ದ ಅರ್ಜುನ್ ಎರಿಗೈಸಿ ಅವರನ್ನು ಪ್ರಧಾನಮಂತ್ರಿ ಅವರು ಅಭಿನಂದಿಸಿದರು


ದೋಹಾದಲ್ಲಿ ನಡೆದ ಫಿಡೆ ವಿಶ್ವ ರಾಪಿಡ್ ಚೆಸ್ ಚಾಂಪಿಯನ್ ಷಿಪ್ ನ ಮುಕ್ತ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಅರ್ಜುನ್ ಎರಿಗೈಸಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. “ಅವರ ಧೈರ್ಯ ಗಮನಾರ್ಹವಾಗಿದೆ. ಅವರ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ”, ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:

“ದೋಹಾದಲ್ಲಿ ನಡೆದ ಫಿಡೆ ವಿಶ್ವ ರಾಪಿಡ್ ಚೆಸ್ ಚಾಂಪಿಯನ್ ಷಿಪ್ ನ ಮುಕ್ತ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಅರ್ಜುನ್ ಎರಿಗೈಸಿ ಅವರ ಬಗ್ಗೆ ಹೆಮ್ಮೆಯಿದೆ. ಅವರ ಧೈರ್ಯ ಗಮನಾರ್ಹವಾಗಿದೆ. ಅವರ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ.’’

@ArjunErigaisi

 

*****