Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ತಂಡದ ಪ್ರದರ್ಶನದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ಪ್ರಧಾನಮಂತ್ರಿ


ಗ್ಲಾಸ್ಗೋದಲ್ಲಿ ನಡೆದ 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ತಂಡದ ಪ್ರದರ್ಶನದ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೆಮ್ಮೆ ವ್ಯಕ್ತಪಡಿಸಿದ್ದಾರೆ.

ಭಾರತವು 13 ಚಿನ್ನದ ಪದಕಗಳು ಸೇರಿ 39 ಪದಕಗಳನ್ನು ಗೆದ್ದಿದೆ ಎಂದು ಪ್ರಧಾನಮಂತ್ರಿ ಸಂತೋಷ ವ್ಯಕ್ತಪಡಿಸಿದರು ಮತ್ತು ಎಲ್ಲಾ ಪದಕ ವಿಜೇತರನ್ನು ಅಭಿನಂದಿಸಿದರು.

ಕ್ರೀಡಾಕೂಟದುದ್ದಕ್ಕೂ ಭಾರತೀಯ ಕ್ರೀಡಾಪಟುಗಳು ಅಸಾಧಾರಣ ಕೌಶಲ್ಯ, ದೃಢಬದ್ಧತೆ ಮತ್ತು ಸಮರ್ಪಣೆಯನ್ನು ಪ್ರದರ್ಶಿಸಿದರು ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಅವರ ಕಠಿಣ ಪರಿಶ್ರಮವು ದೇಶದ ಯುವಕರಿಗೆ ಸ್ಫೂರ್ತಿ ನೀಡುತ್ತದೆ ಎಂದು ಅವರು ಹೇಳಿದರು.

ಇಡೀ ಭಾರತೀಯ ತಂಡಕ್ಕೆ ಅವರ ಭವಿಷ್ಯದ ಪ್ರಯತ್ನಗಳಿಗಾಗಿ ಶ್ರೀ ನರೇಂದ್ರ ಮೋದಿ ಅವರು ಶುಭ ಹಾರೈಸಿದರು ಮತ್ತು ಅವರು ರಾಷ್ಟ್ರಕ್ಕೆ ಹೆಚ್ಚಿನ ಕೀರ್ತಿ ತರುವುದನ್ನು ಮುಂದುವರಿಸುತ್ತಾರೆ ಎಂದು ಆಶಿಸಿದರು.

ಶ್ರೀ ನರೇಂದ್ರ ಮೋದಿ ಅವರು ತಮ್ಮ X ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ;

“ಗ್ಲಾಸ್ಗೋ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ನಮ್ಮ ತಂಡದ ಪ್ರದರ್ಶನದ ಬಗ್ಗೆ ಹೆಮ್ಮೆಯಿದೆ.

ಭಾರತವು 13 ಚಿನ್ನ ಸೇರಿದಂತೆ 39 ಪದಕಗಳನ್ನು ಗೆದ್ದಿರುವುದರಿಂದ ಸಂತೋಷವಾಗಿದೆ. ಪದಕ ವಿಜೇತರಿಗೆ ಅಭಿನಂದನೆಗಳು.

ಕ್ರೀಡಾಕೂಟದುದ್ದಕ್ಕೂ, ನಮ್ಮ ಪ್ರತಿಭಾನ್ವಿತ ಕ್ರೀಡಾಪಟುಗಳು ಅಸಾಧಾರಣ ಕೌಶಲ್ಯ, ದೃಢಸಂಕಲ್ಪ ಮತ್ತು ಬದ್ಧತೆಯನ್ನು ಪ್ರದರ್ಶಿಸಿದ್ದಾರೆ. ಅವರ ಕಠಿಣ ಪರಿಶ್ರಮ ನಮ್ಮ ಯುವಜನರಿಗೆ ಸ್ಫೂರ್ತಿ ನೀಡುತ್ತದೆ.

ಇಡೀ ಭಾರತೀಯ ತಂಡದ ಆಟಗಾರರಿಗೆ ಅವರ ಮುಂದಿನ ಪ್ರಯತ್ನಗಳಿಗಾಗಿ ನನ್ನ ಶುಭಾಶಯಗಳು. ಅವರು ತಮ್ಮ ಅತ್ಯುತ್ತಮ ಕೊಡುಗೆ ನೀಡುವುದನ್ನು ಮುಂದುವರಿಸಿ ರಾಷ್ಟ್ರಕ್ಕೆ ಮತ್ತಷ್ಟು ಕೀರ್ತಿ ತರಲಿ.

#CWG2026”

 

*****