Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

2026ರ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ ಡಿಸ್ಕಸ್ ಎಸೆತದಲ್ಲಿ ಕಂಚಿನ ಪದಕ ಗೆದ್ದ ಸೀಮಾ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ


ಗ್ಲಾಸ್ಗೊ ಕಾಮನ್ ವೆಲ್ತ್  ಕ್ರೀಡಾಕೂಟ 2026 ರ ಮಹಿಳಾ ಡಿಸ್ಕಸ್ ಎಸೆತ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಸೀಮಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಸೀಮಾ ಅವರು 58.65 ಮೀಟರ್ ಡಿಸ್ಕಸ್ ಎಸೆಯುವ ಮೂಲಕ ಪದಕ ತಂದುಕೊಟ್ಟಿದ್ದಾರೆ ಎಂದು ಪ್ರಧಾನಿ ಹೇಳಿದರು.

ಅವರ ಸಾಧನೆಯು ಭಾರತವನ್ನು ಹೆಮ್ಮೆಪಡುವಂತೆ ಮಾಡಿದೆ ಮತ್ತು ರಾಷ್ಟ್ರದ ಯುವಕರಿಗೆ ಸ್ಫೂರ್ತಿ ನೀಡಿದೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಹಾಗೆಯೇ ಅವರ ಮುಂದಿನ ಪ್ರಯತ್ನಗಳಿಗೆ ಅವರು ಶುಭ ಹಾರೈಸಿದ್ದಾರೆ.

ಶ್ರೀ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ;

“ಮಹಿಳೆಯರ ಡಿಸ್ಕಸ್ ಎಸೆತ ಸ್ಪರ್ಧೆಯಲ್ಲಿ 58.65 ಮೀಟರ್ ಅತ್ಯುತ್ತಮ ಎಸೆತದೊಂದಿಗೆ ಕಂಚಿನ ಪದಕ ಗಳಿಸಿದ ಸೀಮಾ ಅವರಿಗೆ ಅಭಿನಂದನೆಗಳು. ಅವರ ಪ್ರಯತ್ನಗಳು ಭಾರತವನ್ನು ಹೆಮ್ಮೆಪಡುವಂತೆ ಮಾಡಿವೆ ಮತ್ತು ನಮ್ಮ ರಾಷ್ಟ್ರದ ಯುವಕರನ್ನು ಪ್ರೇರೇಪಿಸಿವೆ. ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ.

#CWG2026″

 

*****