Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

2026ರ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಪುರುಷರ ಜಾವೆಲಿನ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಯಶ್ ವೀರ್ ಸಿಂಗ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ


ಗ್ಲಾಸ್ಗೊ ಕಾಮನ್ ವೆಲ್ತ್ ಗೇಮ್ಸ್ 2026ರ ಪುರುಷರ ಜಾವೆಲಿನ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಯಶ್ ವೀರ್ ಸಿಂಗ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಯಶ್ ವೀರ್ ಸಿಂಗ್ ಅವರು ಪ್ರಭಾವಶಾಲಿ ಎಸೆತವನ್ನು ಪ್ರದರ್ಶಿಸಿದರು, ಇದು ಅವರ ಉತ್ಸಾಹ ಮತ್ತು ಸಮರ್ಪಣೆಯನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು.

ಅವರ ಸಾಧನೆಯು ಅನೇಕ ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿ ನೀಡುತ್ತದೆ ಎಂದು ಶ್ರೀ ನರೇಂದ್ರ ಮೋದಿ ಅವರು ವಿಶ್ವಾಸ ವ್ಯಕ್ತಪಡಿಸಿದರು ಮತ್ತು ಅವರ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಸಿದರು.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

“ಪುರುಷರ ಜಾವೆಲಿನ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಯಶ್ ವೀರ್ ಸಿಂಗ್ ಅವರಿಗೆ ಅಭಿನಂದನೆಗಳು! ಅವರು ತಮ್ಮ ಉತ್ಸಾಹ ಮತ್ತು ಸಮರ್ಪಣೆಯನ್ನು ಪ್ರತಿಬಿಂಬಿಸುವ ಪ್ರಭಾವಶಾಲಿ ಎಸೆತವನ್ನು ಪ್ರದರ್ಶಿಸಿದರು. ಅವರ ಸಾಧನೆ ಅನೇಕ ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿ ನೀಡುತ್ತದೆ. ಮುಂದಿನ ಪ್ರಯತ್ನಗಳಿಗೆ ಅವರಿಗೆ ಶುಭ ಹಾರೈಕೆಗಳು.

#CWG2026″ 

 

*****