ಪ್ರಪ್ರಥಮ ಬಾರಿಗೆ ದೇಶದ ಪ್ರಧಾನಮಂತ್ರಿಯೊಬ್ಬರು ಚುನಾವಣಾ ಸುಧಾರಣೆ ಬಗ್ಗೆ ಮಾತನಾಡುತ್ತಿರುವುದು ಬಹಳ ಸಂತೋಷದ ವಿಷಯ. ಈ ಮೊದಲಿನ ಸರಕಾರಗಳು ಚುನಾವಣಾ ಸುಧಾರಣೆಯ ನಿಟ್ಟಿನಲ್ಲಿ ಮಹತ್ತರ ನಿರ್ಧಾರ ತೆಗೆದುಕೊಳ್ಳಲು ಹಿಂಜರಿಯುತ್ತಿದ್ದವು, ಆದರೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತನ್ನ ನಿರ್ದಿಷ್ಟವಾದ ನಿಲುವಿನೊಂದಿಗೆ ಚುನಾವಣಾ ಪ್ರಕ್ರಿಯೆಗಳ ಸುಧಾರಣಾ ಕ್ರಮಗಳ ಕಡೆಗೆ ಒಲವು ತೋರಿದ್ದಾರೆ.