ನಿತೀಶ್ ಕುಮಾರ್, ಬಿಹಾರದ ಮುಖ್ಯಮಂತ್ರಿ
₹12 ಲಕ್ಷದವರೆಗಿನ ಆದಾಯ ತೆರಿಗೆ ವಿನಾಯಿತಿ ಹೆಚ್ಚಳವು ಮಧ್ಯಮ ವರ್ಗಕ್ಕೆ ಗಮನಾರ್ಹ ಪರಿಹಾರವನ್ನು ನೀಡಿದೆ. ಕಿಸಾನ್ ಕ್ರೆಡಿಟ್ ಕಾರ್ಡ್‌ಗಳ ಕ್ರೆಡಿಟ್ ಮಿತಿಯನ್ನು ₹3 ಲಕ್ಷದಿಂದ ₹5 ಲಕ್ಷಕ್ಕೆ ಹೆಚ್ಚಿಸಿರುವುದು ರೈತರಿಗೆ ಪ್ರಯೋಜನವನ್ನು ನೀಡುತ್ತದೆ. ಎಂಎಸ್ಎಂಇ  ಕ್ರೆಡಿಟ್ ಗ್ಯಾರಂಟಿ ಕವರ್ ಅನ್ನು ₹5 ಕೋಟಿಯಿಂದ ₹10 ಕೋಟಿಗೆ ವಿಸ್ತರಿಸಿರುವುದು ಉದ್ಯೋಗಾವಕಾಶಗಳನ್ನು ಹೆಚ್ಚಿಸುತ್ತದೆ. ಬಡವರು, ಯುವಕರು ಮತ್ತು ರೈತರ ಪರವಾಗಿ ಬಜೆಟ್ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ, ಇದು ಶ್ಲಾಘನೀಯ. ಇಂತಹ ರಚನಾತ್ಮಕ ಬಜೆಟ್ ಮಂಡಿಸಿದ್ದಕ್ಕಾಗಿ ನಾನು ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರಿಗೆ ನನ್ನ ಕೃತಜ್ಞತೆಯನ್ನು ಅರ್ಪಿಸುತ್ತೇನೆ.